ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

 ಸಂಸ್ಥೆ

 

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯು ಶ್ರೀರಾಂಪುರ ಕ್ರಾಸ್, ಜಕ್ಕೂರು, ಬೆಂಗಳೂರಿನಲ್ಲಿ ಸ್ಥಾಪಿತವಾಗಿದ್ದು, ರಾಚೇನಹಳ್ಳಿ ಕೆರೆಗೆ ಹೊಂದಿಕೊಂಡಂತೆ, ಬ್ಯಾಟರಾಯನಪುರ, ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ (ಬಳ್ಳಾರಿ ರಸ್ತೆ) ಸುಮಾರು ೨ ಕೀ.ಮೀ. ಅಂತರದಲ್ಲಿರುತ್ತದೆ. ಯೋಜನಾ ಆಯೋಗವು ನ್ಯಾಷನಲ್ ಇನ್ಸ್ ಟಿಟ್ಯೂಟ್ ಫಾರ್ ಇಂಟಿಗ್ರೇಟೆಡ್ ರೂರಲ್ ಎನರ್ಜಿ ಪ್ಲಾನಿಂಗ್ (ಐ.ಆರ್.ಇ.ಪಿ.), ದೆಹಲಿ ಮತ್ತು ನಾಲ್ಕು ಪ್ರಾಂತೀಯವಾರು ಇಂಟಿಗ್ರೇಟೆಡ್ ರೂರಲ್ ಎನರ್ಜಿ ಪ್ಲಾನಿಂಗ್ ನ್ನು ದೇಶಾಂದ್ಯಾಂತ ವಿವಿಧ ಸ್ಥಳಗಳಲ್ಲಿ ಅಂದ್ರೆ, ಬೆಂಗಳೂರು (ಕರ್ನಾಟಕ) ದಕ್ಷಿಣ ಪ್ರಾಂತ್ಯ, ಬರೋಡ (ಗುಜರಾತ್) ಪೂರ್ವ ಪ್ರಾಂತ್ಯ, ಲಕ್ನೊ (ಉತ್ತರ ಪ್ರದೇಶ) ಮತ್ತು ಶಿಲಾಂಗ್ (ಮೇಘಾಲಯ) ಉತ್ತರ ಪ್ರಾಂತ್ಯಗಳನ್ನು ಸ್ಥಾಪಿಸಲಾಗಿದೆ. ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯು ಸಹ ಇದರಲ್ಲಿ ಒಂದಾಗಿರುತ್ತದೆ. 

ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯು ಭಾರತ ಸರಕಾರದ ನವ್ಯ ಮತ್ತು ನವೀಕರಿಸಬಹುದಾದ ಇಂಧನ ಮಂತ್ರಾಲಯದ ನೆರವಿನೊಂದಿಗೆ, ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ೨೦೦೦ನೇ ಸಾಲಿನಲ್ಲಿ ಸ್ಥಾಪಿತವಾಯಿತು. ಈ ಸಂಸ್ಥೆಯು ಸಹಕಾರ ಸಂಘಗಳ ನಿಯಮದಡಿಯಲ್ಲಿ ನೊಂದಣಿಯಾದ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಆಡಳಿತ ಸಮಿತಿ ಅಧ್ಯಕ್ಷರು ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿದ್ದು, ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ನವೀಕರಣ​ : 31-08-2021 03:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080