ಅಭಿಪ್ರಾಯ / ಸಲಹೆಗಳು

ಸಂಸ್ಥೆಯ ಪೋಷಕರು

 

ಶ್ರೀಮತಿ ವಂದಿತಾ ಶರ್ಮಾ, ಭಾ.ಆ.ಸೇ

ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರು ಹಾಗೂ ಅಧ್ಯಕ್ಷರು, ಆಡಳಿತ ಮಂಡಳಿ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ

ಶ್ರೀಮತಿ ವಂದಿತಾ ಶರ್ಮಾ 1986ರ ಕೇಡರ್‌ ಭಾರತೀಯ ಆಡಳಿತ ಸೇವಾಧಿಕಾರಿ. ಚಂಡೀಗಡ್‌ ನ ಪಂಜಾಬ್‌ ವಿಶ್ವವಿದ್ಯಾಲಯದಲ್ಲಿ ಆಂಗ್ಲಾ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಫಿಲಿಫೈನ್ಸ್‌ನ ಮನಿಲಾದ ಏಷ್ಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ನಲ್ಲಿ ಅಭಿವೃದ್ಧಿ ನಿರ್ವಹಣೆಯಲ್ಲಿ ಅಭಿವೃದ್ಧಿ ಆಡಳಿತದ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ.‌ ಅವರು ಲಾಭಕ್ಕಾಗಿ ಅಲ್ಲದೇ ಶಿಕ್ಷಣ ಅಭಿವೃದ್ಧಿ ಸರ್ಕಾರೇತರ ಸಂಸ್ಥೆ ಕೇಂದ್ರವನ್ನು ಪ್ರಾರಂಭಿಸಿದರು. ಅವರು ಮಂಡ್ಯದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ ಆಗಿದ್ದರು. ಅವರು ಹಲವು ಇಲಾಖೆಗಳಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ – ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿ; ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಿರ್ದೇಶಕರಾಗಿ; ಕರ್ನಾಟಕ ಸರ್ಕಾರದ ಸರ್ವ ಶಿಕ್ಷಣ ಅಭಿಯಾನದಲ್ಲಿ ಯೋಜನಾ ನಿರ್ದೇಶಕರಾಗಿ; ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ; ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್‌ನಲ್ಲಿ ಮಿಷನ್‌ ನಿರ್ದೇಶಕರಾಗಿ; ಕರ್ನಾಟಕ ರಾಜ್ಯ ಕೈಗಾರಿಕಾ ಹೂಡಿಕೆ ಅಭಿವೃದ್ಧಿ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ; ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ; ಕರ್ನಾಟಕ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ; ಕರ್ನಾಟಕ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ; ಭಾರತ ಸರ್ಕಾರದ ಬಾಹ್ಯಾಕಾಶ ಆಯೋಗ ಮತ್ತು ಪರಮಾಣು ಶಕ್ತಿ ಆಯೋಗದಲ್ಲಿ ಸದಸ್ಯರು (ಹಣಕಾಸು); ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಅಪರ ಕಾರ್ಯದರ್ಶಿಯಾಗಿ; ಮೈರಾಡಾ ನಲ್ಲಿ ಸದಸ್ಯರಾಗಿ; ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಇಲಾಖೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿದ್ದಾರೆ.

 

ಶ್ರೀ ಲುಥ್ಫುಲ್ಲಾ ಖಾನ್ಅಥೀಕ್, ಭಾ..ಸೇ

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಇಲಾಖೆ & ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ

ಶ್ರೀ ಲುಥ್‌ಫುಲ್ಲಾ ಖಾನ್‌ ಅಥೀಕ್‌ ರವರು 1991 ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು. ಅವರು ಅಮೇರಿಕಾದ ಸಿರಾಕ್ಯೂಸ್‌ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ವಿಜ್ಞಾನ ಪಡೆದಿದ್ದಾರೆ. ಅವರು ಕರ್ನಾಟಕ ರಾಜ್ಯದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಅಖಿಲ ಭಾರತ ಮತ್ತು ಇತರ ಸೇವೆಗಳ ಕೇಡರ್‌ ನಿರ್ವಹಣೆಯ ಜವಾಬ್ದಾರಿಯುತ ಉಪ ಕಾರ್ಯದರ್ಶಿ (ಸೇವೆಗಳು) ಒಳಗೊಂಡಿದೆ. ಕಾರವಾರದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮತ್ತು ಜಿಲ್ಲಾ ಆಡಳಿತದ ಜವಾಬ್ದಾರಿಯನ್ನು ಹೊಂದಿರುವ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ವಿಶ್ವ ಬ್ಯಾಂಕ್‌ ನೆರವಿನೊಂದಿಗೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಯೋಜನೆಯನ್ನು ಜಾರಿಗೆ ತಂದರು. ಪ್ರಾಥಮಿಕ ಶಿಕ್ಷಣದ ಜವಾಬ್ದಾರಿಯನ್ನು ಹೊಂದಿರುವ ಸರ್ವ ಶಿಕ್ಷಣ ಅಭಿಯಾನ ಇಲಾಖೆಯಲ್ಲಿ ರಾಜ್ಯ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

 

ಇವರು ರಾಜ್ಯದಿಂದ ನಿಯೋಜನೆ ಮೇರೆಗೆ ಭಾರತ ಸರ್ಕಾರದ ಪ್ರಧಾನ ಮಂತ್ರಿ ಕಛೇರಿಯಲ್ಲಿ ನಿರ್ದೇಶಕರಾಗಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪರಿಕಲ್ಪನೆ ಮತ್ತು ನೀತಿಗಳ ಸೂತ್ರೀಕರಣ ಪ್ರಕ್ರಿಯೆಯಲ್ಲಿ ಹಾಗೂ ಅವುಗಳ ಅಭಿವೃದ್ಧಿಗಾಗಿ ಅನುಮೋದನೆಯ ಕೆಲಸದಲ್ಲಿ ತೊಡಗಿಸಿಕೊಂಡರು. ಭಾರತ ಸರ್ಕಾರದಿಂದ ವಿದೇಶಿ ನಿಯೋಜನೆ ಆಧಾರದ ಮೇಲೆ ವಾಷಿಂಗ್‌ಟನ್‌ ಡಿ.ಸಿ.ಯ ವಿಶ್ವ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಹಿರಿಯ ಸಂಪಾದಕರಾಗಿ ಕೆಲಸ ಮಾಡುವ ಅವಕಾಶವು ದೊರಕಿತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವಿಭಾಗದ (ಡಿ.ಪಿ.ಎ.ಆರ್.) ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಮೇ-2016 ರಿಂದ ಮೇ-2018 ರವರಗೆ ಕರ್ನಾಟಕದ ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದರಲ್ಲಿ ಅವರು ಮುಖ್ಯಮಂತ್ರಿಗಳ ಕಛೇರಿಯ ಮುಖ್ಯಸ್ಥರಾಗಿದ್ದರು ಮತ್ತು ಪ್ರಮುಖ ನೀತಿ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಮುಖ್ಯಮಂತ್ರಿಯವರಿಗೆ ಸಲಹೆ ನೀಡುತ್ತಿದ್ದರು.

 

ಪ್ರಸ್ತುತ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ – ಎಂ.ಜಿ.ಎನ್.‌ಆರ್.ಇ.ಜಿ.ಎ., ಗ್ರಾಮೀಣ ಕುಡಿಯುವ ನೀರು ಸರಬರಾಜು, ಸ್ವಚ್ಛ ಭಾರತ ಅಭಿಯಾನ, ಗ್ರಾಮೀಣ ರಸ್ತೆಗಳು ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಅನುಷ್ಠಾನದ ಜವಾಬ್ದಾರಿ ಹೊಂದಿದ್ದಾರೆ.

 

ಶ್ರೀಮತಿ ಉಮಾ ಮಹಾದೇವನ್‌, ಭಾ.ಆ.ಸೇ.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಪಂಚಾಯತ್‌ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕರ್ನಾಟಕ ಸರ್ಕಾರ

ಮಾನ್ಯ ಶ್ರೀಮತಿ ಉಮಾ ಮಹಾದೇವನ್‌, ಭಾ.ಆ.ಸೇ, ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಅಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಂಚಾಯತ್‌ ರಾಜ್)‌ ಆಗಿ ದಿನಾಂಕ 08-04-2019 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

 

1992 ರಲ್ಲಿ ಭಾರತೀಯ ಆಡಳಿತ ಸೇವೆಗೆ ಸೇರ್ಪಡೆಗೊಂಡ ಮಾನ್ಯರು ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಆಡಳಿತಾನುಭವವನ್ನು ಹೊಂದಿರುವವರಾಗಿದ್ದಾರೆ. ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಯೋಜನಾ ಇಲಾಖೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪರಮಾಣು ಶಕ್ತಿ ಇಲಾಖೆ, ಭಾರತ ಸರ್ಕಾರ ಮತ್ತು ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಫಂಡಮೆಂಟಲ್‌ ರಿಸರ್ಚ್‌ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಕರ್ನಾಟಕದ ಮೊದಲ ಮಾನವ ಅಭಿವೃದ್ಧಿ ವರದಿ ಸಿದ್ಧಪಡಿಸಿದ ಕಾರ್ಯನಿರತ ಗುಂಪಿನ ಸದಸ್ಯರಾಗಿರುವ ಇವರು ಬರಹಗಾರರು ಮತ್ತು ಪುಸ್ತಕ ವಿಮರ್ಶಕರಾಗಿದ್ದಾರೆ ಮತ್ತು ಸಾಮಾಜಿಕ ವಲಯ ಮತ್ತು ಸಮಸ್ಯೆಗಳ ಕುರಿತು ಅನೇಕ ಲೇಖನಗಳನ್ನು ಪ್ರಕಟಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಂಚಾಯತ್‌ ರಾಜ್)‌ ಹುದ್ದೆಗೆ ವರ್ಗಾವಣೆ ಹೊಂದಿರುತ್ತಾರೆ.

 

ಪ್ರಜಾಪ್ರಭುತ್ವವನ್ನು ತಳಹಂತದಲ್ಲಿ ಗಟ್ಟಿಗೊಳಿಸಲು ಸಂವಿಧಾನಬದ್ಧವಾಗಿ ರಚಿತವಾಗಿರುವ ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳಾದ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳು ಗ್ರಾಮೀಣ ಭಾಗದ ಯೋಜನೆಗಳನ್ನು ಆಯಾ ಪ್ರದೇಶದ ನಾಗ್ರೀಕರೇ ತಮ್ಮ ಬೇಕು ಬೇಡಗಳನ್ನು ಮತ್ತು ನೈಜ ಅವಶ್ಯಕತೆಗಳನ್ನು ನಿರ್ಣಯಿಸಲು, ತಾನ್ಮೂಲಕ ಗ್ರಾಮೀಣ ಭಾಗದ ಜನತೆಯ ಜೀವನ ಮಟ್ಟವನ್ನು ಉನ್ನತೀಕರಣವಾಗಿ ಉತ್ತಮ ಜೀವನ ನಡೆಸಲು ಸಹಾಯಕವಾಗುವಂತೆ ಅತ್ಯುತ್ತಮ ಸಾಮಾಜಿಕ ವ್ಯವಸ್ಥೆ ರೂಪಿಸಲು ಜವಾಬ್ಧಾರಿಗಳನ್ನು ಹೊಂದಿರುವ ಸರ್ಕಾರದ ಪ್ರಮುಖ ಇಲಾಖೆಯಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಂಚಾಯತ್ ರಾಜ್)ಗಳಾಗಿ ಮಾನ್ಯರು ಸಾರಥ್ಯ ವಹಿಸಿದ್ದಾರೆ.

ಈ ಸಂಬಧ ಮಾನ್ಯ ಶ್ರೀಮತಿ ಉಮಾ ಮಹಾದೇವನ್ ರವರಿಗೆ ಕರ್ನಾಟಕ ವಿಕಾಸವು ಸ್ವಾಗತ ಕೋರುತ್ತಾ, ಅಭಿನಂದನೆಗಳೊಂದಿಗೆ ಅವರ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಹಾಗೂ ಶುಭವಾಗಲಿ ಎಂದು ಹಾರೈಸುತ್ತೇವೆ.

 

ಪ್ರಾರಂಭದಿಂದಲೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಕಾರ್ಯನಿರ್ವಾಹಕ ನಿರ್ದೇಶಕರ ಪಟ್ಟಿ:

ಕ್ರಮ ಸಂಖ್ಯೆ

ಹೆಸರು

ಇಂದ

ವರೆಗೆ

1.

ಶ್ರೀ ಭರತ್‌ಕುಮಾರ್‌, ಕ.ಆ.ಸೇ.

12.07.2000

11.09.2002

2.

ಶ್ರೀಮತಿ ಎನ್.‌ ದೇವಕುಮಾರಿ, ಕ.ಆ.ಸೇ.

11.09.2002

10.11.2004

3.

ಶ್ರೀಮತಿ ರಿತು ಕಕ್ಕರ್‌, ಭಾ.ಅ.ಸೇ.

10.11.2004

28.07.2008

4.

ಶ್ರೀ ಸಿ.ಎಸ್.‌ ರಾಜು, ಭಾ.ಅ.ಸೇ

28.07.2008

16.03.2011

5.

ಶ್ರೀ ಜಿ.ಎಸ್.‌ ಪ್ರಭು, ಭಾ.ಅ.ಸೇ. (ಉಸ್ತುವಾರಿ)

16.03.2011

06.07.2011

6.

ಶ್ರೀ ಎಂ.ಆರ್.‌ ಕರ್ಕಿ, ಭಾ.ಅ.ಸೇ.

06.07.2011

30.04.2013

7.

ಶ್ರೀ ಹೆಚ್‌.ಜಿ. ಶಿವಾನಂದಮೂರ್ತಿ, ಭಾ.ಅ.ಸೇ (ಉಸ್ತುವಾರಿ)

01.05.2013

19.07.2013

8.

ಶ್ರೀ ಹೆಚ್‌.ಪಿ. ಪ್ರಕಾಶ್‌, ಭಾ.ಅ.ಸೇ (ಉಸ್ತುವಾರಿ)

19.07.2013

06.03.2014

9.

ಶ್ರೀ ಪುನಟಿ ಶ್ರೀಧರ್‌, ಭಾ.ಅ.ಸೇ.

06.03.2014

23.05.2016

10.

ಡಾ|| ಟಿ.ವಿ. ಮೋಹನ್‌ದಾಸ್‌, ಭಾ.ಅ.ಸೇ.

23.05.2016

06.07.2017

11.

ಶ್ರೀ ಮನೋಜ್‌ ಕುಮಾರ್‌‌ ಶುಕ್ಲ, ಭಾ.ಅ.ಸೇ.

06.07.2017

29.02.2024

ಇತ್ತೀಚಿನ ನವೀಕರಣ​ : 07-03-2024 05:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080